Recruitment NHAI 2026

Recruitment NHAI 2026: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಉದ್ಯೋಗ ಅವಕಾಶಗಳ  ಅರ್ಜಿಗಳನ್ನು ಆಹ್ವಾನಿಸಲಾಗಿದೆ

Recruitment NHAI 2026: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಏನೆಲ್ಲಾ ಬೇಕು ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಮತ್ತೆ ಕೊನೇ ದಿನಾಂಕ ಯಾವಾಗ ಎಂಬುವ ಸಂಪೂರ್ಣ ಮಾಹಿತಿಗಳನ್ನು ಇಲ್ಲಿ ನೀಡಲಾಗಿರುತ್ತದೆ ಮುಂದೆ ತಿಳಿದುಕೊಳ್ಳಿ.

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಅಂದರೆ (NHAI) ಅಧಿಕೃತ ಅಧಿಸೂಚನೆಯ ಮೂಲಕ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿ ಮತ್ತು ಆಸಕ್ತ ಅಭ್ಯರ್ಥಿಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದ್ದಾರೆ. ಭಾರತ ಸರ್ಕಾರದ ಅಡಿಯಲ್ಲಿ ಬರುವ (NHAI) ಉದ್ಯೋಗ ಹುಡುಕಾಡುತ್ತಿರುವ ಅಭ್ಯರ್ಥಿಗಳು ಈ ಸುವರ್ಣ ಅವಕಾಶವನ್ನು ಬಳಸಿಕೊಳ್ಳಿ.

  • ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 9ರ ವರೆಗೂಕಾಲಾವಕಾಶ ಇರುತ್ತದೆ, ಆಸಕ್ತಿಯುಳ್ಳ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.
  • ಅಭ್ಯರ್ಥಿಯ ವಿದ್ಯಾರ್ಹತೆ ಮತ್ತು ವಯೋಮಿತಿ ವಿವರಗಳು

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ  ಅಂದರೆ (NHAI)  ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ  ಪಡೆದಿರುವ ಮಂಡಳಿಗಳ ಅಥವಾ ವಿಶ್ವವಿದ್ಯಾಲಯಗಳಿಂದ ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಬಿಇ/ ಬಿ.ಟೆಕ್‌ ಪದವಿಯನ್ನು ಪೂರ್ಣಗೊಳಿಸಿರಬೇಕಾಗುತ್ತದೆ. ಅಭ್ಯರ್ಥಿಯ ಗರಿಷ್ಠ ವಯಸ್ಸು 9-02-2026ರಂತೆ 30 ವರ್ಷಗಳು. ವಯೋಮಿತಿ ಸಡಿಲಿಕೆ: ಒಬಿಸಿ ಅಭ್ಯರ್ಥಿಗಳು 3 ವರ್ಷ, ಎಚ್‌ಸಿ/ಎಸ್‌ಟಿ 5 ವರ್ಷ, ಪಿಡಬ್ಲ್ಯೂಬಿಡಿ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯೂಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ, ಪಿಡಬ್ಲ್ಯೂಬಿಡಿ (ಎಸ್‌ಸಿ/ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷ ಸಡಿಲಿಕೆ ಇರಲಿದೆ.

  • ಈ ಅಧಿ ಸೂಚನೆಗಳನ್ನು ಸಂಪೂರ್ಣವಾಗಿ ಓದಿಕೊಳ್ಳಿ * https://vacancyportal.nhai.org/DeputyMgrGateCivil/UserManager/User/index.aspxಗೆ ಭೇಟಿ ನೀಡಿ. NHAI ಆನ್‌ಲೈನ್ ಅರ್ಜಿ  ಕೇಳಲಾದ ವಿವರಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ.
  • ಅಗತ್ಯ ಪ್ರಮಾಣ ಪತ್ರಗಳು/ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಿಮ್ಮ ಇತ್ತೀಚಿನ ಛಾಯಾಚಿತ್ರದೊಂದಿಗೆ ಅಪ್ಲೋಡ್ ಮಾಡಿ. ಎಲ್ಲಾ ಪ್ರಕ್ರಿಯೆ ಮುಗಿದ ಬಳಿಕ ಕೊನೆಯದಾಗಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ.